ಕಾರವಾರ : ಕಾಂಗ್ರೆಸ್ ಶಾಸಕ ಸತೀಶ್ ಸೈಲ್ m ಮನೆ ಮೇಲೆ ಇಡಿ ದಾಳಿ ನಡೆಸಿದ್ದ ಪ್ರಕಾರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಡಿ ಅಧಿಕಾರಿಗಳು ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.
ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್ ಸೈಲ್ ಹೊರಗಿದ್ದಾರೆ. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್ ಮಾಡಿದೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆಯನ್ನು ಸತೀಶ್ ಸೈಲ್ ಎದುರಿಸುತ್ತಿದ್ದಾರೆ. ಪ್ರಕರಣ ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿರುವ ಹೊತ್ತಲ್ಲೇ ಇ.ಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕಾರವಾರ (ಉತ್ತರ ಕನ್ನಡ), ಗೋವಾ, ಮುಂಬೈ ಮತ್ತು ನವದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿದೆ.
ED, Bengaluru has conducted search operations on 13th and 14th August, 2025 at multiple locations in Karwar (Uttara Kannada), Goa, Mumbai and New Delhi under PMLA in an on-going investigation into Satish Krishna Sail @ Satish Sail, MLA and others persons /entities, who were… pic.twitter.com/OMSyj5FDtJ
— ED (@dir_ed) August 15, 2025