ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳ ಮೇಲೆ ಇಂದು ಬೆಳ್ಳಂ ಬೆಳಿಗ್ಗೆ ಇಡಿ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು 5 ಕಡೆ ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿ ಮನೆಗಳ ಮೇಲೆ ಇದೀಗ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಮಾಡಿದ ಆರೋಪದ ಅಡಿ ದಾಳಿ ನಡೆಸಲಾಗಿದೆ.ವಿದೇಶಗಳಲ್ಲಿ ಶಾಸಕ ಸುಬ್ಬಾರೆಡ್ಡಿ ಕುಟುಂಬದ ಸದಸ್ಯರು ಆಸ್ತಿ ಹೊಂದಿದ್ದಾರೆ ಎನ್ನಲಾಗಿದ್ದು, ಶಾಸಕ ಸುಬ್ಬಾರೆಡ್ಡಿ ಬಿಜಿನೆಸ್ ಪಾರ್ಟ್ನರ್ ಗಳಿಗೆ ಸೇರಿದ ಆಸ್ತಿ ಎನ್ನಲಾಗಿದೆ. ಹಾಗಾಗಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.