ನವದೆಹಲಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪವನ್ ಖೇರಾ ವಿರುದ್ಧ ಮಾನಹಾನಿ ಅಥವಾ ಆಕ್ಷೇಪಾರ್ಹ ಹೇಳಿಕೆಗಳ ಕುರಿತು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ನಾಯಕ ದವನಿಕ್ಕೆ ರಾಗಿ ಹಿನ್ನೆಡೆ ಆಗಿದ್ದು ಪವನ್ ಕೀರ ನಿರೀಕ್ಷಣ ಜಾಮೀನು ಅರ್ಜಿ ವಜಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಸಂಸದ ಪವನ್ ಖೇರಾ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿರುವ ಪ್ರಕರಣದಲ್ಲಿ ಖೇರಾ ಅವರ ಜಾಮೀನು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ. ಈ ವಿಷಯದಲ್ಲಿ ನಾವು ಜಾಮೀನು ವಿಸ್ತರಿಸಲು ಸಾಧ್ಯವಿಲ್ಲ. ಅರ್ಜಿದಾರರು ಈ ಕುರಿತು ಅಸ್ಸಾಂನ ಸಂಬಂಧಪಟ್ಟ ನ್ಯಾಯಾಲಯವನ್ನೇ ಸಂಪರ್ಕಿಸಬೇಕು ಎಂದು ಪೀಠವು ಸ್ಪಷ್ಟಪಡಿಸಿದೆ.
ಕೆಲವು ದಿನಗಳ ಹಿಂದಷ್ಟೇ ತೆಲಂಗಾಣ ಹೈಕೋರ್ಟ್ ಪವನ್ ಖೇರಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆಯಾದಾಗ ಸುಪ್ರೀಂ ಕೋರ್ಟ್ ಆ ಜಾಮೀನಿಗೆ ತಡೆ ನೀಡಿತ್ತು. ಈಗ ಸಾಗಣೆ ಜಾಮೀನನ್ನೂ ವಿಸ್ತರಿಸಲು ನಿರಾಕರಿಸುವ ಮೂಲಕ ಖೇರಾ ಅವರ ಮುಂದಿದ್ದ ಕಾನೂನು ರಕ್ಷಣೆಯ ದಾರಿಗಳು ಕಿರಿದಾಗಿವೆ.
ಈ ಹಿಂದೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನೀಡಿದ್ದ ಯಾವುದೇ ಮಧ್ಯಂತರ ಆದೇಶಗಳು ಅಸ್ಸಾಂನ ಸ್ಥಳೀಯ ನ್ಯಾಯಾಲಯದ ಮೇಲೆ ಪ್ರಭಾವ ಬೀರಬಾರದು. ಪವನ್ ಖೇರಾ ಅವರು ಜಾಮೀನು ಕೋರಿ ಅಲ್ಲಿನ ನ್ಯಾಯಾಲಯಕ್ಕೆ ಹೋದಾಗ, ಆ ನ್ಯಾಯಾಲಯವು ಪ್ರಕರಣದ ಅರ್ಹತೆಯ ಆಧಾರದ ಮೇಲೆ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಳ್ಳಬಹುದು.








