ತುಮಕೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಸಿಎಂ ಸ್ಥಾನ ಕೊಡದಿದ್ದರೆ ಕಾಂಗ್ರೆಸ್ ಸರ್ವನಾಶವಾಗುತ್ತೆ ಎಂದು ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಸಿಎಂ ಸ್ಥಾನ ಕೊಡದಿದ್ದರೆ ಕಾಂಗ್ರೆಸ್ ಸರ್ವನಾಶವಾಗುತ್ತೆ. ಡಿ.ಕೆ. ಶಿವಕುಮಾರ್ ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ಹೀಗಾಗಿ ಅವರು ಸಿಎಂ ಆಗಬೇಕು. ಅವರು ದುಡಿದಿದ್ದಕ್ಕೆ ಕೂಲಿ ಕೊಡಬೇಕು ಎಂದು ಹೇಳಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನ ಮುಗಿದ ಕೂಡಲೇ ಅವರನ್ನು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಬೇಕು. ಇಲ್ಲ ಅಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಹೇಳಿದ್ದಾರೆ.








