ಬೆಂಗಳೂರು : ಮಹಿಳೆಯೊಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ಹಿಂದೆ ಬಿದ್ದು, ಪ್ರೀತಿಸುವಂತೆ ಕಾಟ ಕೊಡುತ್ತಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.
ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಅವರಿಗೆ ಮಹಿಳೆಯೊಬ್ಬರು ಪ್ರೀತಿಸುವಂತೆ ನಿರಂತರವಾಗಿ ಇನ್ಸ್ಪೆಕ್ಟರ್ ಹಿಂದೆ ಬಿದ್ದಿದ್ದಳು ಎಂಬ ಆರೋಪ ಕೇಳಿಬಂದಿದೆ. ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗಿದೆ.
ಚಿನ್ನಿ ಐ ಲವ್ ಯು, ಯು ಮಸ್ಟ್ ಲವ್ ಮಿ ಎಂದು ಸಾವಿರಾರು ಮೆಸೇಜ್ ಗಳನ್ನು ಕಳುಹಿಸಿತ್ತಾರಂತೆ. ಮಹಿಳೆ ಬರ್ರೋಬ್ಬರಿ 11 ಮೊಬೈಲ್ ನಂಬರ್ ಗಳಿಂದ ಇನ್ಸ್ ಪೆಕ್ಟರ್ ಗೆ ಮೆಸೇಜ್ ಕಳುಹಿಸಿ ಕಾಟ ಕೊಡುತ್ತಿದ್ದು, ಇದರಿಂದ ಬೇಸತ್ತ ಇನ್ಸ್ ಪೆಕ್ಟರ್ 11 ನಂಬರ್ ಗಳನ್ನು ಬ್ಲಾಕ್ ಮಾಡಿದ್ದಾರೆ.
ಮಹಿಳೆ ತಾನು ಕಾಂಗ್ರೆಸ್ ಕಾರ್ಯಕರ್ತೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತನಗೆ ಪರಿಚಯ ಎಂದು ಹೇಳಿಕೊಂಡಿದ್ದಾಳೆ. ಮೋಟಮ್ಮ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಇರುವ ಫೋಟೋಗಳನ್ನು ಕಳುಹಿಸಿ, ಪ್ರೀತಿಸಲೇಬೇಕು ಎಂದು ಇನ್ಸ್ಪೆಕ್ಟರ್ ಮೇಲೆ ಒತ್ತಡ ಹೇರಿದ್ದಾಳೆ ಎಂದು ದೂರಲಾಗಿದೆ. ಸದ್ಯ ಮಹಿಳೆಯ ಕಾಟಕ್ಕೆ ಬೇಸತ್ತ ಇನ್ಸ್ ಪೆಕ್ಟರ್ ಸತೀಶ್, ಕರ್ತವ್ಯಕ್ಕೆ ಅಡ್ಡಿ, ಮಹಿಳೆಯಿಂದ ಕಿರುಕುಳ, ಬೆದರಿಕೆ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ.








