ಹಾಸನ : ಪತಿ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರಿಂದ ಹಾಸನ ಸಕಲೇಶಪುರದ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಕಾನ್ಸ್ಟೇಬಲ್ ಸೋಮಶೇಖರ್ ಎನ್ನುವವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮೃತ ಸೋಮಶೇಖರ್ 112 ಪೊಲೀಸ್ ವಾಹನದ ಚಾಲಕನಾಗಿ l ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರು. ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.