ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಆಡುಗೋಡಿ ಪೊಲೀಸ್ ಕ್ವಾಟ್ರಸ್ ನಲ್ಲಿ ನೀಡೋ ಬಿಗಿದ ಸ್ಥಿತಿಯಲ್ಲಿ ಮುಬಾರಕ್ ಮುಜಾವರ್ ಎನ್ನುವವರ ಮೃತದೇಹ ಪತ್ತೆಯಾಗಿದೆ.
ಬೆಂಗಳೂರಿನ ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಾನ್ಸ್ಟೇಬಲ್ ಮುಬಾರಕ್ ಮುಜಾವರ್ ಶವ ಪತ್ತೆಯಾಗಿದೆ. ಮೃತ ಮುಬಾರಕ್ CAR ದಕ್ಷಿಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ 15 ದಿನಗಳ ಹಿಂದೆ ಕಾನ್ಸ್ಟೇಬಲ್ ಮುಬಾರಕ್ ನೇಣು ಬಿಗಿದುಕೊಂಡಿದ್ದಾರೆ. ವಾಸನೆ ಬರುತ್ತಿದ್ದಕ್ಕೆ ಮನೆಯಲ್ಲಿ ನೋಡಿದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.