ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಸಭೆ ಆಯುಕ್ತೆ ಅಮೃತಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಪದಗಳಿಂದ ನಿಂದಿಸಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜೀವ್ ಗೌಡ ನಿರೀಕ್ಷಣಾ ಮೇಲೆ ಕೋರಿ ಅರ್ಜಿ ಸಲ್ಲಿಸಿದ್ದಾನೆ.
ಚಿಕ್ಕಬಳ್ಳಾಪುರದ 2ನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು, ಆರೋಪಿ ರಾಜೀವ್ ಗೌಡ ಪರ ವಕೀಲ ಶಿವಶಂಕರ್ ರೆಡ್ಡಿ ಅರ್ಜಿ ಸಲ್ಲಿಸಿದ್ದಾರೆ. ಅಮೃತ ಗೌಡಗೆ ರಾಜೀವ್ ಗೌಡ ಅಕ್ರಮವಾಗಿ ಕಟ್ಟಿದ ಬ್ಯಾನರ್ ತೆರವು ಮಾಡಿದ್ದಕ್ಕೆ ಅಶ್ಲೀಲ ಪದಗಳಿಂದ ನಿಂದಿಸಿದ ಅಲ್ಲದೆ ಜೀವ ಬೆದರಿಕೆ ಹಾಕಿದ್ದ.
ಬಳಿಕ ಅಮೃತ ಗೌಡ ತೀವ್ರವಾಗಿ ಮನನೊಂದು ರಾಜೀವ್ ಗೌಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ಕೊಟ್ಟಿದ್ದರು. ದೂರು ದಾಖಲಾಗುತ್ತಿದ್ದಂತೆ ಇತ್ತ ಕಾಂಗ್ರೆಸ್ ಮುಖಂಡ ರಾಜೇಗೌಡ ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾನೆ.ಆತನ ಬಂಧನಕ್ಕಾಗಿ ಈಗಾಗಲೇ ಪೊಲೀಸರು ಮೂರು ತಂಡಗಳನ್ನು ರಚನೆ ಮಾಡಿದ್ದಾರೆ. ಇದೀಗ ನಿರೀಕ್ಷಣಾ ಜಾಮೀನು ಕೋರಿ ರಾಜೀವ್ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾನೆ.








