ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಒಂದು ತೀರ್ಪಿನ ಕುರಿತಾಗಿ ಸಚಿವ ಜಮೀರ್ ಅಹ್ಮದ್ ಹೈಕೋರ್ಟ್ ಆದೇಶ ರಾಜಕೀಯ ತೀರ್ಪು ಆಗಿದೆ ಎಂದು ಲಘುವಾಗಿ ಮಾತನಾಡಿದ್ದರು.ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಟಿಜೆ ಅಬ್ರಹಾಂ ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಲಘುವಾಗಿ ಮಾತನಾಡಿದ್ದರು. ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.
ಈ ಒಂದು ತೀರ್ಪು ಕುರಿತು, ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಖಾನ್ ಹೈಕೋರ್ಟ್ ಆದೇಶ ರಾಜಕೀಯ ತೀರ್ಪು ಎಂದು ಹೇಳಿದ್ದರು. ಇದು ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟ ತಂದೊಡ್ಡಿದೆ. ಈ ಸಂಬಂಧ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಟಿಜೆ ಅಬ್ರಾಹಂ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚಿಗೆ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಇತರೆ ಸಚಿವರು, ಅಸಮಾಧಾನ ಹೊರಹಾಕಿದ್ದರು. ಸಚಿವರ ಅಸಮಾಧಾನ ವ್ಯಕ್ತವಾದ ಬೆನ್ನೆಲೆ ಜಮೀರ್ ಅಹ್ಮದ್ ಸುದ್ದಿಗೋಷ್ಠಿ ನಡೆಸಿ ನಾನು ಬಾಯಿತಪ್ಪಿ ಹೇಳಿರಬಹುದು, ಹೊರತು ಉದ್ದೇಶಪೂರ್ವಕವಾಗಿ ನಾನು ಹೇಳಿಲ್ಲ.ಹೈಕೋರ್ಟ್ ತೀರ್ಪು ರಾಜಕೀಯ ಪ್ರೇರಿತ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ. ಬಾಯಿ ತಪ್ಪಿ ಬಂದಿದೆ ಎಂದು ಅವರು ಸ್ಪಷ್ಟನೆ ನೀಡಿದ್ದರು.