ಬೆಳಗಾವಿ : ರಾಜ್ಯಕ್ಕೆ ಕೊರೋನ ರೂಪಾಂತರೀಯ ಹೊಸ ತಳಿ ಎಂಟ್ರಿ ಕೊಟ್ಟಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಒಂದೇ ಕಡೆ ಕರೋನ ಪ್ರಕರಣಗಳ ಸಂಖ್ಯೆ 100ರ ಗಡಿ ದಾಟಿದೆ. ಅಲ್ಲದೆ ಬೆಂಗಳೂರಿನಲ್ಲಿ 85 ವರ್ಷದ ವರದರೊಬ್ಬರು ಬಲಿಯಾಗಿದ್ದು, ಇದೀಗ ಬೆಳಗಾವಿಯಲ್ಲಿ ಕೂಡ ಕೊರೋನಾ ಸೋಂಕಿಗೆ ಮತ್ತೋರ್ವ ವೃದ್ಧರು ಬಲಿಯಾಗಿದ್ದಾರೆ.
ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧನಿಗೆ ಚಿಕಿತ್ಸೆ ಗೆ ಅಂತಾ ಬೀಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ. ನಿನ್ನೆ ರಾತ್ರಿ ಕೋವಿಡ್ ಪಾಸಿಟಿವ್ ಎಂದು ತಪಾಸಣೆಯಲ್ಲಿ ಕಂಡು ಬಂದಿತ್ತು. ತಡರಾತ್ರಿ ಚಿಕಿತ್ಸೆ ಫಲಿಸದೆ ವೃದ್ಧ ಮೃತಪಟ್ಟಿದ್ದಾರೆ.
ಕೊವಿಡ್ ತಪಾಸಣೆ ಮಾಡಿದಾಗ ಪಾಸಿಟಿವ್ ಎಂದು ಗೊತ್ತಾದ ತಕ್ಷಣವೇ ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಿಸದ ಕಾರಣ 70 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಕೊವಿಡ್ ನಿಯಮಾವಳಿ ಪ್ರಕಾರವೇ ರಾತ್ರಿಯೇ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೆರಿಸಿದ್ದಾರೆ.