ದಕ್ಷಿಣಕನ್ನಡ : ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಇದೀಗ ಭಾರಿ ಮಳೆಯಿಂದಾಗಿ ರಾಜ್ಯದ ದಕ್ಷಿಣಕನ್ನಡ ಮತ್ತು ಬೀದರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲಾ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಅಂಗನವಾಡಿಯಿಂದ ಹಿಡಿದು ಪಿಯು ಕಾಲೇಜು ವರೆಗೆ ಜಿಲ್ಲಾಡಳಿತ ರಜೆ ನೀಡಿದೆ.
ಇನ್ನು ಬೀದರ್ ಜಿಲ್ಲೆಯಲ್ಲಿ ಸಹ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮ ಎಲ್ಲಾ ಬಿಇಒ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.