ಹಾವೇರಿ : ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯ ಮನೆಗೆ ಗುತ್ತಿಗೆದಾರನ ಸಂಬಂಧಿಕರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಗುತ್ತಿಗೆದಾರ ಶಿವನಾಂದ ಕುನ್ನೂರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಮನೆಗೆ ಪೆಟ್ರೋಲ್ ಸುರಿದು ಸಂಬಂಧಿಕರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಗ್ಗಾಂವಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಆರೋಪಿ ನಾಗರಾಜ್ ಮನೆಗೆ ಸಂಬಂಧಿಕರು ಬೆಂಕಿ ಹಚ್ಚಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎನ್ನುವ ಗುತ್ತಿಗೆದಾರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಸ್ತಿಯ ವಿಚಾರಕ್ಕೆ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸುಪಾರಿ ಕೊಟ್ಟು ಸಂಬಂಧಿಕರೇ ಶಿವಾನಂದ ಅವರನ್ನು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟಕ ಶಿಗ್ಗಾವಿ ಠಾಣೆ ಪೊಲೀಸ್ರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಕೊಲೆ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.