ದಾವಣಗೆರೆ : ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದೀಗ ದಾವಣಗೆರೆಯಲ್ಲಿ ಹೃದಯಾಘಾತದಿಂದ ಕಾರಿನಲ್ಲೇ ಗುತ್ತಿಗೆದಾರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆ ನಗರದ ಈಶ್ವರ್ ಧ್ಯಾನ ಮಂದಿರದ ಬಳಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದ ಪರಿಣಾಮ ಕಾರು ಗೋಡೆಗೆ ಡಿಕ್ಕಿ ಹೊಡೆದು ಪ್ರಥಮದರ್ಜೆ ಗುತ್ತಿಗೆದಾರ ಸುರೇಶ್ (42) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.