ಬೆಂಗಳೂರು : ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಬಗ್ಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ನಟ ಕಮಲ್ ಹಾಸನ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವರಾಜ್ ಕುಮಾರ್ ಅವರು, ಕಮಲ್ ಹಾಸನ್ ಕೂಡ ಕನ್ನಡಕ್ಕೆ ಗೌರವ ಕೊಡುತ್ತಾರೆ. ನಿನ್ನೆ ಬಂದಾಗಲೂ ಅಷ್ಟೇ ಚೆನ್ನಾಗಿ ಮಾತನಾಡಿದ್ದಾರೆ. ನಾನು ಅವರ ಬಹಳ ದೊಡ್ಡ ಅಭಿಮಾನಿ. ನಮ್ಮನ್ನು ಗೌರವದಿಂದ ಸಮಾರಂಭಕ್ಕೆ ಕರೆದಿದ್ದರು. ಅದೇ ಗೌರವದಿಂದ ನಾನೂ ಸಹ ಹೋಗಿದ್ದೆ . ವೇದಿಕೆ ಮೇಲೆ ಏನು ತಪ್ಪಾಯಿತು ಎಂಬುದು ನನಗೆ ಗೊತ್ತಾಗಲಿಲ್ಲ. ಇಲ್ಲಿ ಬಂದು ನೋಡಿದಾಗ ವಿವಾದ ಆಗಿತ್ತು ಎಂದರು.
ನಾವು ಅವರನ್ನು ನೋಡಿ ಬೆಳೆದವರು, ಕಮಲ್ ಅವ್ರಿಗೆ ನಾನು ಕೊಡುವ ಸ್ಥಾನ ಬೇರೆ. ನಾನು ಅವರಿಂದ ಇನ್ಸ್ಪೈರ್ ಆಗಿದ್ದೀನಿ. ಕಂಡಿತ ಅದಕ್ಕೆ ಏನು ಪ್ರತಿಕ್ರಿಯೆ ಕೊಡಬೇಕೋ ಅವರು ಕೊಡ್ತಾರೆ ಎಂದು ತಿಳಿಸಿದ್ದಾರೆ.
ನಟ ಕಮಲ್ ಹಾಸನ್ ವಿರುದ್ಧ ದೂರು ದಾಖಲು
ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆಗೆ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ದೂರು ಸಲ್ಲಿಕೆ ಮಾಡಿದ್ದಾರೆ.ಕನ್ನಡಿಗರ ಭಾವನೆಗೆ ನಟ ಕಮಲ್ ಹಾಸನ್ ಧಕ್ಕೆ ತಂದಿದ್ದಾರೆ.ಆತನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿದ್ದಾರೆ.
ಥಗ್ ಲೈಫ್ ಇವೆಂಟ್ ನಲ್ಲಿ ಭಾಗಿಯಾಗಿದ್ದಂತ ನಟ ಕಮಲ್ ಹಾಸನ್ ಅವರು, ನಟ ಶಿವರಾಜ್ ಕುಮಾರ್ ಎದುರೇ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬುದಾಗಿ ಹೇಳುವ ಮೂಲಕ ಈಗ ವಿವಾದ ಸೃಷ್ಠಿಸಿದ್ದಾರೆ. ಈ ಮೂಲಕ ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಿತ ಹೇಳಿಕೆ ನೀಡಿದ್ದಾರೆ.