ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಅಬ್ಬರ ಮುಂದುವರೆದಿದ್ದು, ಇಂದು ಮತ್ತೆ ಮೂವರಿಗೆ ಸೋಂಕು ದೃಢಪಟ್ಟಿದೆ.
ಹೌದು, ಇಂದು ಮೂವರಲ್ಲಿ ಸೋಂಕು ದೃಢಪಟ್ಟಿದೆ. ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಡಿಜೆಹಳ್ಳಿ, ಸಿವಿರಾಮನ್ ನಗರ ಹಾಗೂ ಜೈ ಭುವನೇಶ್ವರಿ ನಗರದ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಮೂವರಿಗೂ ಯಾವುದೇ ಟ್ರಾವೆಲ್ ಹಿಸ್ಟ್ರಿ ಇಲ್ಲ. ಆದಾಗ್ಯೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಮೂವರನ್ನೂ ಹೋಂ ಐಸೋಲೇಷನ್ ಮಾಡಿ ಚಿಕಿತ್ಸೆ ನಿಡಲಾಗುತ್ತಿದೆ.