ಶಿವಮೊಗ್ಗ: ಜಿಲ್ಲೆಯಲ್ಲಿ ವ್ಯಕ್ತಿಯೋರ್ವನಿಗೆ ಕರೋನ ದೃಢಪಟ್ಟಿದೆ. 75 ವರ್ಷದ ವೃದ್ಧ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದು ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾವೇರಿ ಜಿಲ್ಲೆಯ ವೃದ್ಧ ಮೇ 19 ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು.ಅವರಿಗೆ ಕರೋನ ದೃಢಪಟ್ಟಿದೆ.
ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದಿದ್ದ ವೃದ್ಧ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರವಷ್ಟೆ ಬಿಡುಗಡೆಗೊಂಡು ಮನೆಗೆ ಹೋಗಿದ್ದರು. ಆದರೆ ಕೋವಿಡ್ ಟೆಸ್ಟ್ ರಿಪೋರ್ಟ್ ಬಂದಿದ್ದು ಅವರಿಗೆ ಕರೋನಾ ಇರುವುದು ದೃಢಪಟ್ಟಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಎಸ್ಒ ಡಾ. ನಾಗರಾಜ ನಾಯ್ಕ, ವೃದ್ಧನಿಗೆ ಕೊರೊನಾ ತಗುಲಿರುವುದು ನಿಜ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದು ಮನೆಗೆ ಮರಳಿದ ಬಳಿಕ ಸೋಂಕು ದೃಢಪಟ್ಟಿದೆ. ಹಾವೇರಿ ಜಿಲ್ಲೆಯ ಡಿಎಚ್ಒ ಅವರಿಗೆ ಮಾಹಿತಿ ನೀಡಲಾಗಿದೆ” ಎಂದಿದ್ದಾರೆ.