ಬೆಂಗಳೂರು : ಕೊರೊನಾ ಹೆಚ್ಚಳ ಹಿನ್ನೆಲೆ ಸರ್ಕಾರ ಹೈ ಅಲರ್ಟ್ ಆಗಿದ್ದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಸೂಚನೆ ನೀಡಿದೆ.
ಭಾರತಕ್ಕೆ ಕೊರೋನಾ ರೂಪಾಂತರ ಹೊಸ ತಳಿ ಕಾಲಿಟ್ಟಿದ್ದು, ಇದುವರೆಗೂ ಭಾರತದದ್ಯಂತ ಒಂದು ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ ಆಗಿದ್ದು, ಇದೀಗ ರಾಜ್ಯದಲ್ಲಿ ಇಂದು 80 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಅಲ್ಲದೆ ಬೆಂಗಳೂರಿನಲ್ಲೇ ನಿನ್ನೆ 73 ಜನರಿಗೆ ಕೊರೊನ ಪಾಸಿಟಿವ್ ವರದಿ ಬಂದಿದೆ.
ರಾಜ್ಯದಲ್ಲಿ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ ಇದೀಗ 80ಕ್ಕೆ ಏರಿಕೆಯಾಗಿವೆ. ದಕ್ಷಿಣ ಕನ್ನಡ ವಿಜಯನಗರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎರಡು, ಮೈಸೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಪೋಸಿಟೀವ್ ವರದಿ ಬಂದಿದ್ದು, ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.
ಕೋವಿಡ್ ಪಾಸಿಟಿವ್ ಸೋಂಕಿತರು ಬೆಂಗಳೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಕೋವಿಡ್ ಟೆಸ್ಟಿಂಗ್ ಕೂಡ ಬೆಂಗಳೂರಿನಲ್ಲಿ ಹೆಚ್ಚಿಸಲಾಗಿದೆ. ಇಂದಿಗೆ ರಾಜ್ಯದಲ್ಲಿ ಒಟ್ಟು 80 ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರಿನಲ್ಲೇ 73 ಪ್ರಕರಣಗಳಿವೆ. ಏಲ್ಲಿಯೂ ಕೋವಿಡ್ ನಿಂದಾಗಿ ಸಾವು ಸಂಭವಿಸಿಲ್ಲ. ಆರೋಗ್ಯ ಇಲಾಖೆ… pic.twitter.com/2Xr73YfsBA
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 26, 2025