ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹಾಡಹಗಲೇ ಕಾರ್ಪೋಟರ್ ಮಗಳನ್ನು ಇರಿದು ಕೊಲೆ ಮಾಡಿರುವ ಘಟನೆ. ಬಿವಿಬಿ ಕಾಲೇಜಿನಲ್ಲಿ ಪಾಲಿಕೆ ಸದ್ಯಸ ನಿರಂಜನ ಹಿರೇಮಠ ಅವರ ಮಗಳಾದ ನೇಹಾ ಕೊಲೆಯಾದ ಯುವತಿಯಾಗಿದ್ದಾರೆ ಎನ್ನಲಾಗಿದೆ. ನೇಹಾಳನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದರು ಎನ್ನಲಾಗಿದೆ. ಆದರೆ ಆಕೆ ಮಾರ್ಗಮಧ್ಯಯೇ ಸಾವನ್ನಪ್ಪಿದ್ದಾರೆಅ ಂತ ತಿಳಿದುಬಂದಿದೆ.
ಘಟನೆ ಸಂಬಂಧ ಯುವಕನನ್ನು ಪೊಲೀಸರುಬಂಧಿಸಿದ್ದಾರೆ ಎನ್ನಲಾಗಿದೆ. ಸದ್ಯ ಆತನಿಂದ ಕೊಲೆ ಸಂಬಂಧ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಂಬಂಧಿಕರು ಆಸ್ಪತ್ರೆಗೆ ಆಗಮಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿದೆ.