ಬೆಂಗಳೂರು : ಕಳೆದ ವರ್ಷ ರಾಜ್ಯ ಕಾಂಗ್ರೆಸ್ ಸರ್ಕಾರ ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಿದ್ದು ಈ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಗಂಭೀರವಾಗಿ ಆರೋಪಿಸಿದ್ದರು. ಇದೀಗ ವರ್ಗಾವಣೆ ದಂಧೆಯಲ್ಲಿ ಮತ್ತೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು ಸಚಿವ ಆರ್ ಬಿ ತಿಮ್ಮಪುರ ವಿರುದ್ಧ ಇದೀಗ ಇಡೀಗೆ ದೂರು ಸಲ್ಲಿಸಲಾಗಿದೆ.
ಅಬಕಾರಿ ಖಾತೆ ಸಚಿವ ಆರ್. ಬಿತಿಮ್ಮಾಪುರ ವಿರುದ್ಧ ಇಡಿಗೇ ದೂರು ಸಲೀಸಾಲಾಗಿದ್ದು, ಸಾಮಾಜಿಕ ಕಾರ್ಯಕರ್ತ ಗಣೇಶ ಕಲ್ಲಹಳ್ಳಿ ಎಂಬುವವರಿಂದ ಇಡಿಗೆ ದೂರು ಸಲ್ಲಿಸಲಾಗಿದೆ. ಅಬಕಾರಿ ಇಲಾಖೆಯ ಡಿಸಿ, ಡಿವೈಎಸ್ಪಿ ಗಳಿಂದ ಹಣ ಪಡೆದು ವರ್ಗಾವಣೆ ಮಾಡಲಾಗಿದೆ ಲೋಕಸಭೆ ಚುನಾವಣೆಗೆ ಹಣ ಹೊಂದಿಸಲು ಲಂಚ ಸ್ವೀಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ವರ್ಗಾವಣೆ ಹೆಸರಿನಲ್ಲಿ ದಂದೆ ನಡೆಸುತ್ತಿದ್ದಾರೆ ಎಂದು ಆರೋಪಿಸಿಲಾಗುತ್ತಿದೆ. ವರ್ಗಾವಣೆ ಹೆಸರಲ್ಲಿ 18 ಕೋಟಿ ಲಂಚ ಸ್ವೀಕರಿಸಿದ್ದಾರೆ ಎಂದು ಆರೋಪಿಸಿ ಇಡಿಗೆ ದೂರು ಸಲ್ಲಿಸಲಾಗಿದೆ. 18 ಕೋಟಿ ಹಣದಲ್ಲಿ 13 ಕೋಟಿ ಸಚಿವರಿಗೆ, ಉಳಿದ ಹಣ ಸಹಾಯಕ ಕಾರ್ಯದರ್ಶಿ ಸೇರಿ ಹಲವರ ಪಾಲಾಗಿದೆ ಎಂದು ಹೇಳಲಾಗುತ್ತಿದೆ.
ಕೋಲಾರ ಅಬಕಾರಿ ಡಿಸಿ ಬಸವರಾಜ್ ಸಂದೇಗುವಾಡ್, ರಂಗಪ್ಪ, ಬೆಂಗಳೂರು ದಕ್ಷಿಣ ಅಬಕಾರಿ ಡಿಸಿ ವಿವೇಕ್ ಖಾತೆಗೆ ಹಣ ತಲುಪಿದೆ ಲಂಚದ ಹಣದಲ್ಲಿ ಅಧಿಕಾರಿಗಳು ಶಾಮಿಲ್ ಆಗಿದ್ದಾರೆಂದು ದೂರು ಸಲ್ಲಿಸಲಾಗಿದೆ. ಅಬಕಾರಿ ಸಚಿವರ ಲಂಚಾವತಾರಕ್ಕೆ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ಜಾರಿ ನಿರ್ದೇಶನಾಲಯ ಸೂಕ್ತ ತನಿಖೆ ನಡೆಸಬೇಕು ಎಂದು ದೂರು ಸಲ್ಲಿಸಲಾಗಿದೆ. ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.