ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೆಲವೇ ಕ್ಷಣಗಳಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಮಂಡನೆಯಾಗಲಿದೆ.
ಹೌದು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ ವರದಿ-2015) ವರದಿ ಮಂಡನೆಯಾಗಲಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಬರೋಬ್ಬರಿ 169 ಕೋಟಿ ರೂ.ಗಳ ವೆಚ್ಚದಲ್ಲಿ ಸಿದ್ದಪಡಿಸಿರುವ ಜಾತಿಗಣತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಲಿದ್ದು, ಪರಿಶೀಲನೆ ಸಚಿವ ಸಂಪುಟ ಉಪಸಮಿತಿ ರಚನೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬರೋಬ್ಬರಿ 169 ಕೋಟಿ ರೂಪಾಯಿ ವೆಚ್ಚದಲ್ಲಿ ಈ ವರದಿಯನ್ನು ಸಿದ್ಧಪಡಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಸಿಎಂ ಇದನ್ನು ಮಂಡಿಸಲಿದ್ದಾರೆ.