ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 42ನೇ ACMM ನ್ಯಾಯಾಲಯದಲ್ಲಿ ಶಾಸಕ ಮುನಿರತ್ನ ಅವರನ್ನು ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ಜಡ್ಜ್ ವಿಚಾರಣೆಯನ್ನು ನಾಳೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.
ಹೌದು ಮಹಿಳೆಯೊಬ್ಬರು ಮುನಿರತ್ನ ನನ್ನ ಮೇಲೆ ಅತ್ಯಾಚಾರ ಆಗಿದ್ದಾನೆ ಎಂದು ನಿನ್ನೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನೆಲೆಯಲ್ಲಿ ಇಂದು ರಾಮನಗರ ಪೊಲೀಸರು ಬೆಂಗಳೂರಿಗೆ ಆಗಮಿಸಿ ಮುನಿರತ್ನ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು . ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ಜಡ್ಜ್ ನಾಳೆ ಮುಂದೂಡಿ 42ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ.