ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಕೊಲೆ ಪ್ರಕರಣದ ಪ್ರಮುಖ ಆರೋಪಿ A1ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆಯ ಬಳಿಕ ನ್ಯಾಯಾಧೀಶರು ಮೇ 20ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದರು.
ಇಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ವಿಚಾರಣೆ ನಡೆಯಿತು. A1 ಪವಿತ್ರಾಗೌಡ, ನಂದೀಶ್, , ವಿನಯ್, ನಾಗರಾಜ್, ಪವನ್, ಲಕ್ಷ್ಮಣ್, ದೀಪಕ್, ಕಾರ್ತಿಕ್, ಪ್ರದೋಷ್ ಹಾಗು ಕೇಶವಮೂರ್ತಿ ಸೇರಿದಂತೆ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದರು.
ಇನ್ನು A2 ನಟ ದರ್ಶನ್ ಹೊರತುಪಡಿಸಿ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದೆ ವೇಳೆ ದರ್ಶನ್ ಪರ ವಕೀಲರು ಅನಾರೋಗ್ಯದಿಂದ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕೋರ್ಟ್ ಗೆ ಗೈರಾಗಿದ್ದ ದರ್ಶನ್ ಪರ ವಕೀಲರಿಗೆ ಎಚ್ಚರಿಕೆ ನೀಡಿದರು. ಕೋರ್ಟ್ ಗೆ ಗೈರಾಗಿದ್ದ ದರ್ಶನ್ ಪರ ವಕೀಲರಿಗೆ ಯಾವುದೇ ಕಾರಣಕ್ಕೂ ಕೋರ್ಟ್ ವಿಚಾರಣೆಗೆ ಗೈರಾಗಬಾರದು ಎಂದು ಎಚ್ಚರಿಕೆ ನೀಡಿದರು.