ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರು ಇತ್ತೀಚಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬಳಿಕ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಹೌದು ನಟ ದರ್ಶನ್ ಅವರು ಜಾಮೀನು ಕೋರಿ ಇತ್ತೀಚೆಗೆ ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್, ದರ್ಶನ್ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರಿಂದ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿ ಆದೇಶ ಹೊರಡಿಸಿತು. ಈ ಮೂಲಕ ನಟ ದರ್ಶನ್ ಗೆ ಮತ್ತೆ ನಿರಾಸೆಯಾಗಿದೆ.
ಇದೆ ವೇಳೆ ಇಂದು ಸಂಜೆ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಮತ್ತೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಈ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ.ಆದರೂ ಅವರಿಗೆ ಯಾರು ಶೂರೀಟಿ ನೀಡದ ಕಾರಣ ಇನ್ನೂ ಮೂವರು ಆರೋಪಿಗಳು ಜೈಲಿನಲ್ಲಿ ಇದ್ದಾರೆ. ಹಾಗಾಗಿ ನಟ ದರ್ಶನ್ ಗೆ ಅಕ್ಟೋಬರ್ 4ರವರೆಗೆ ಜೈಲೇ ಗತಿ ಆದಂತಾಗಿದೆ