ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು ದರ್ಶನ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೇಷನ್ಸ್ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 30 ಕ್ಕೆ ಮುಂದೂಡಿ ಆದೇಶ ಹೊರಡಿಸಿತು.
ಕೊಲೆ ಕೇಸಿನ A2 ಆರೋಪಿಯಾಗಿರುವ ದರ್ಶನ್ ಜಾಮೀನು ಅರ್ಜಿಗೆ ಸದ್ಯ ಅಕ್ಷೇಪಣೆ ಸಲ್ಲಿಸಲಾಗಿದೆ. ವಾದ ಮಂಡನೆಗೆ ಕಾಲಾವಕಾಶ ಕೋರಿ ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ. ಹಾಗಾಗಿ ವಕೀಲ ಸುನಿಲ್ ಮನವಿಯ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆ ಮಾಡಲಾಗಿದೆ.