ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಿಯಮಿತ ಜಾಮೀನು ಪಡೆದಿರುವ ನಟ ದರ್ಶನ್, ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ದರ್ಶನ್ ಇಂದ 37 ಲಕ್ಷ ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಆ ಹಣವನ್ನು ಮರಳಿ ಕೊಡಿಸುವಂತೆ ದರ್ಶನ್ ಅರ್ಜಿ ಹಾಕಿದ್ದರು. ಅರ್ಜೆ ವಿಚಾರಣೆ ನಡೆಯಿಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಫೆಬ್ರವರಿ 1ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.
ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನದ ಬಳಿಕ ಅವರಿಂದ ಬರೋಬ್ಬರಿ 37 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಹಣವನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಬಳಸಲಾಗಿತ್ತು ಎಂದು ಪೊಲೀಸರು ಆರೋಪ ಮಾಡಿದ್ದರು. ರೇಣುಕಾ ಸ್ವಾಮಿ ಕೊಲೆಯನ್ನು ತಾವು ಮಾಡಿದ್ದಾಗಿ ಒಪ್ಪಿಕೊಳ್ಳಲು ಹೊರಗಡೆಯಿಂದ ಕರೆಸಲಾಗಿದ್ದ ಮೂವರಿಗೆ ಅದಾಗಲೇ ಒಂದಿಷ್ಟು ಹಣವನ್ನು ಸಹ ನೀಡಲಾಗಿತ್ತು. ಹಣ ವಶಪಡಿಸಿಕೊಂಡಿದ್ದ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದರು.
ಆದರೆ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು, ವಶಪಡಿಸಿಕೊಂಡ ಹಣ, ಸಾಲವಾಗಿ ನೀಡಲಾಗಿದ್ದ ಹಣ ಅದು ಎಂದು ವಾದಿಸಿದ್ದರು. ಮೋಹನ್ ರಾಜ್ ಎಂಬುವರಿಗೆ ಸಾಲದ ರೂಪದಲ್ಲಿ ನಟ ದರ್ಶನ್ ಹಣ ನೀಡಿದ್ದರು. ಆ ಹಣವನ್ನು ಮೋಹನ್ ರಾಜ್, ದರ್ಶನ್ಗೆ ಮರಳಿದ್ದರು. ಆ ಹಣವನ್ನು ದರ್ಶನ್ ತಮ್ಮ ನಿವಾಸದಲ್ಲಿ ಇರಿಸಿಕೊಂಡಿದ್ದರು. ಆ ಹಣ ಕೊಲೆ ಮುಚ್ಚಿಹಾಕಲು ಬಳಸಲೆಂದು ಇರಿಸಿಕೊಂಡಿದ್ದ ಹಣ ಅಲ್ಲ ಎಂದು ವಾದ ಮಾಡಿದ್ದರು.
ಇದೀಗ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ದರ್ಶನ್, ತಮ್ಮ ಹಣವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿದ್ದಾರೆ. ನ್ಯಾಯಾಲಯವು ಆದಾಯ ತೆರಿಗೆ ಇಲಾಖೆಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಇದರ ಬನಲ್ಲೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಈ ಒಂದು ಅರ್ಜಿಯ ವಿಚಾರಣೆಯನ್ನು ಫೆಬ್ರವರಿ ಒಂದರಂದು ನಡೆಸಲು ಆದೇಶ ಹೊರಡಿಸಿದೆ.