ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರಿಗೆ ಜಾಮೀನು ಆದೇಶವನ್ನು ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಕಾಯ್ದಿರಿಸಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.
ಇಂದು ಬೆಳಗ್ಗೆ ಸಿ.ಟಿ. ರವಿ ಅವರನ್ನು ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಪೊಲೀಸರು ಹಾಜರುಪಡಿಸಿದ್ದು, ಸಿ.ಟಿ ರವಿ ಪರ ವಕೀಲ ಎಂ.ಬಿ ಜಿರಲಿ ವಾದ ಮಾಡಿದ್ದಾರೆ. ವಿಚಾರಣೆ ನಡೆಸಿದ ಜೆಎಂಎಫ್ ಸಿ ಕೋರ್ಟ್ ನ ನ್ಯಾಯಾಧೀಶರು, ಸಿ.ಟಿ. ರವಿ ಅವರಿಗೆ ಜಾಮೀನು ಆದೇಶವನ್ನು ಕಾಯ್ದಿರಿಸಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.