ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದು, ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಒಂದು ಪ್ರಕರಣದ ಜಾಮೀನು ಅರ್ಜಿ ವಜಾಗೊಳಿಸಿದೆ.
ಹೌದು ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ವೀಕ್ಷಣೆಗೆ ಕೋರ್ಟ್ ಅವಕಾಶ ನೀಡಿದ್ದು, ಅದರ ಬೆನ್ನಲ್ಲೇ, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮತ್ತೊಂದು ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾಗೊಂಡಿದೆ. ಕ್ರೈಂ ನಂಬರ್ 20/2024 ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾ ಗೊಳಿಸಲಾಗಿದೆ. ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ ಗಜಾನನ ಭಟ್ ಈ ಕುರಿತು ಆದೇಶ ಹೊರಡಿಸಿದ್ದಾರೆ.