ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 9 ರವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಸಿಎಂ ನ್ಯಾಯಾಲಯವು ಆದೇಶ ಹೊರಡಿಸಿದೆ.
ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂದು ವಿಚಾರಣೆ ನಡೆಸಿದ ನ್ಯಾಯಾಲಯವು, ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಬೆಂಗಳೂರಿನ 24ನೇ ACMM ನ್ಯಾಯಾಲಯ ಇದೀಗ ಆದೇಶ ಹೊರಡಿಸಿದೆ.
ಇನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ರನ್ನು ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲು ಜೈಲಿನ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.