ಬೆಂಗಳೂರು : ಮೈಸೂರು ಜಿಲ್ಲೆಯ ಕೆ.ಆರ್.ನಗರ ಮಹಿಳೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ವಿಸ್ತರಿಸಿದೆ. ಈಗಾಗಲೇ ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣವಾಗಿದ್ದು, ಜಾಮೀನು ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿದೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಅಪಹರಣಕ್ಕೆ ಒಳಗಾಗಿದ್ದ ಮಹಿಳೆಯ ಮಗ ದೂರು ನೀಡಿದ್ದ HD ರೇವಣ್ಣ, ಭವಾನಿ ರೇವಣ್ಣ ಹಾಗೂ ಸಂಬಂಧಿಯಾಗಿರುವ ಬಾಬು ಮೇಲೆ ಸಂತ್ರಸ್ತೆಯ ಮಗ ದೂರು ನೀಡಿದ್ದ. ಎಸ್ಐಟಿ ಅಧಿಕಾರಿಗಳು ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು.ನಂತರ ಭವಾನಿ ರೇವಣ್ಣಗು ಕೂಡ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.
ಈ ಸಂಬಂಧ ಎಸ್ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್ ಕೊಟ್ಟಿತ್ತು. ನೋಟಿಸ್ ನೀಡುತ್ತಿದ್ದಂತೆ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕತಿಸಿತ್ತು. ಅರ್ಜಿ ತಿರಸ್ಕೃತಗೊಳ್ಳುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ತಯಾರಿ ನಡೆಸಿದ್ದರು.ಅದರಂತೆ ಜೂ.07 ರಂದು ಜಾಮೀನು ಸಿಕ್ಕ ಬೆನ್ನಲ್ಲೇ ಭವಾನಿ ರೇವಣ್ಣ ವಿಚಾರಣೆಗೆ ಎಸ್ಐಟಿ ಎದುರು ಹಾಜರಾಗಿದ್ದರು.