ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಾದ ಚೇತನ್ ಗೌಡ, ಲಿಖಿತ್ ಗೌಡಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪೆನ್ ಡ್ರೈವ್ ಹಂಚಿಕೆ ಪ್ರಕರಣದ 6 ಮತ್ತು 7 ನೇ ಆರೋಪಿಗಳಾದ ಚೇತನ್, ಲಿಖಿತ್ ಗೌಡ ಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಲಿಖಿತ್ ಗೌಡ ಹಾಗೂ ಚೇತನ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಮೇ.12ರಂದು ಬಂಧಿಸಿದ್ದರು.