ತುಮಕೂರು : ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಗ್ ಬಾಸ್ ಮಾಜಿ ಸ್ಪರ್ಧೆ ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು ಆಗಿದೆ. ತುಮಕೂರು ಜಿಲ್ಲೆಯ ಮಧುಗಿರಿ 4ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಕೃಷಿಹೊಂಡದಲ್ಲಿ ಸೋಡಿಯಂ ಬಳಸಿ ಡ್ರೋನ್ ಪ್ರತಾಪ್ ಸ್ಪೋಟದ ಪ್ರಯೋಗ ಮಾಡಿದ್ದರು. ಜನಕಲೋಟಿ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಈ ಒಂದು ಸ್ಪೋಟ ಪ್ರಯೋಗ ಮಾಡಿದ್ದರು. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಎಂಬ ಗ್ರಾಮದಲ್ಲಿ ಸ್ಪೋಟ ನಡೆಸಿದ್ದರು. ಸ್ಫೋಟದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಡ್ರೋನ್ ಪ್ರತಾಪ್ ಅಪ್ಲೋಡ್ ಮಾಡಿದ್ದರು.
ಸ್ಪೋಟದ ವಿಡಿಯೋವನ್ನು ಆಧರಿಸಿ ಮಿಡಿಗೇಶಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಬಳಿಕ ಡ್ರೋನ್ ಪ್ರತಾಪ್ ಅವರನ್ನು ಅರೆಸ್ಟ್ ಮಾಡಿದ್ದರು. ಬಳಿಕ ಕೋರ್ಟ್ ಡ್ರೋನ್ ಪ್ರತಾಪ್ ಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಹಾಗಾಗಿ ಇದೀಗ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ನಾಳೆ ಜೈಲಿನಿಂದ ಡ್ರೋನ್ ಪ್ರತಾಪ್ ಬಿಡುಗಡೆ ಆಗಲಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿತ್ತು.