ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸದ್ಯ ಜೈಲಿನಲ್ಲಿರುವ ನಟ ದರ್ಶನ್ ಗೆ ಕಂಬಳಿ ನೀಡಲು ಕೋರ್ಟ್ ಸೂಚನೆ ನೀಡಿದೆ.
ಹೌದು, ಜೈಲಿನಲ್ಲಿ ವಿಪರೀತ ಚಳಿಯಿಂದ ನಿದ್ದೆ ಬರದೇ ಒದ್ದಾಡುತ್ತಿದ್ದೇನೆ ನನಗೆ ಕಂಬಳಿ ಕೊಡಿ ಎಂದು ನಟ ದರ್ಶನ್ ಕೋರ್ಟ್ ಗೆ ಮನವಿ ಮಾಡಿಕೊಂಡಿದ್ದು, ಮನವಿ ಪುರಸ್ಕರಿಸಿರುವ ಕೋರ್ಟ್ ಕಂಬಳಿ ನೀಡುವಂತೆ ಜೈಲಾಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.
ವರ್ಚುವಲ್ ಆಗಿ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದ ನಟ ದರ್ಶನ್ ಚಳಿಯಿಂದ ನಿದ್ದೆ ಮಾಡಲು ಆಗುತ್ತಿಲ್ಲ. ನಮಗೆ ಕಂಬಳಿ ನೀಡಿ ಎಂದು ಮನವಿ ಮಾಡಿಕೊಂಡಿದ್ದರು. ಹೀಗಾಗಿ ನಟ ದರ್ಶನ್ ಗೆ ಜಡ್ಜ್ ಕೂಡಲೇ ಕಂಬಳಿ ನೀಡುವಂತೆ ಜೈಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ವೀಡಿಯೋ ವೈರಲ್ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಈ ಹಿನ್ನೆಲೆ ನಟ ದರ್ಶನ್ ಆಪ್ತ ಧನ್ವೀರ್ ವಿಚಾರಣೆಗೆ ಹಾಜರಾಗಿದ್ದರು.








