ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸೂರಜ್ ರೇವಣ್ಣ ಅವರು ತಮ್ಮ ಎರಡನೇ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯವು ಜುಲೈ 18ಕ್ಕೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ 18ಕ್ಕೆ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಈಗಾಗಲೇ ಸಹೋದರ ಹಾಗೂ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇತ್ತೀಚಿಗೆ ಮಕ್ಕಳನ್ನು ನೋಡಲು ಹೊಳೆನರಸೀಪುರದ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ತಾಯಿ ಭವಾನಿ ರೇವಣ್ಣ ಜೈಲಿಗೆ ಆಗಮಿಸಿದ್ದರು. ಮಕ್ಕಳನ್ನು ಬಿಡುಗಡೆಗೊಳಿಸಲು ಈಗಾಗಲೇ ಎಚ್ ಡಿ ರೇವಣ್ಣ ಅವರು ವಕೀಲರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.