ಬೆಂಗಳೂರು : ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಬೆಂಗಳೂರಿನ ಗ್ರಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದ 6 ಜನ ನಕ್ಸಲರನ್ನು ಪೊಲೀಸರು ಇಂದು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ಜನೆವರಿ 30 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಹೌದು ನಿನ್ನೆ ಸರ್ಕಾರದ ಮುಂದೆ ಶರಣಾಗಿದ್ದ 6 ಜನ ನಕ್ಸಲರಿಹೆ ಇದೀಗ ನ್ಯಾಯಾಂಗ ಬಂಧನ ವಿಧಿಸಿ NIA ವಿಶೇಷ ಕೋಟ್ ಆದೇಶ ಹೊರಡಿಸಿದೆ. ನಿನ್ನೆ ಬೆಂಗಳೂರಿನ ಗ್ರಾಹಕಚೇರಿ ಕೃಷ್ಣಾದಲ್ಲಿ ಆರು ಜನ ನಕ್ಷತ್ರರು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಜಿ ಪರಮೇಶ್ವರ್ ಅವರ ಸಮ್ಮುಖದಲ್ಲಿ ಸರ್ಕಾರಕ್ಕೆ ಶರಣಾಗಿದ್ದರು.
ನಕ್ಸಲರು ಶರಣಾದ ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇಂದು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸೋಕು ಮುನ್ನ ವೈದ್ಯಕೀಯ ಪರೀಕ್ಷೆಗೆ ಅವರನ್ನು ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ ಪೊಲೀಸರು ಇದೀಗ ಕೋರ್ಟ್ ಆರು ಜನ ನಕ್ಸಲರನ್ನು ಜನೆವರಿ 30 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.