ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಗೆ ಆಗಸ್ಟ್ 3ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಇಂದು ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಬಿ.ನಾಗೇಂದ್ರ ಅವರನ್ನು ಹಾಜರುಪಡಿಸಲಾಗಿದ್ದು, ಕೋರ್ಟ್ ಆಗಸ್ಟ್ 3 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.