ಕೋಲಾರ : ಅಪ್ರಾಪ್ತೆ ಮೇಲೆ ಅತ್ಯಾಚಾರ ಬಾಲ್ಯ ವಿವಾಹ ಪ್ರಕರಣ ಅಪರಾಧಿಗೆ 20 ವರ್ಷ ಶಿಕ್ಷೆ ಹಾಗೂ 45,000 ದಂಡ ವಿಧಿಸಿ ಕೋಲಾರ ಪೋಕ್ಸೋ ವಿಶೇಷ ನ್ಯಾಯಾಲಯ ಈ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಅಪರಾಧಿ ಕಾರು ಚಾಲಕ ಗಂಗಾಧರ್ ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ಮಾರುತಿ ನಗರದ ನಿವಾಸಿಯಾಗಿರುವ ಗಂಗಾಧರ್ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ. ಬಳಿಕ ಮದುವೆ ಕೂಡ ಆಗಿದ್ದ. ಈ ಕುರಿತು 2023 ಮೇ 17ರಂದು ಈ ಬಗ್ಗೆ ಬಾಲಕಿಯ ಪೋಷಕರು ದೂರು ನೀಡಿದ್ದರು. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ತನಿಖೆ ಬಳಿಕ ಪೊಲೀಸರು ಕೋರ್ಟಿಗೆ ದೋಷಾರೋಪ ಪಟ್ಟಿ ಸಲ್ಲಿಸಿದರ ಪ್ರಕರಣದ ವಿಚಾರಣೆ ನಡೆಯಿಸಿದ ನ್ಯಾ.ಕೆಬಿ ಪ್ರಸಾದ್ ಅವರು ಇದೀಗ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಗಂಗಾಧರ್ಗೆ 20 ವರ್ಷ ಶಿಕ್ಷೆ ರೂ. 45,000 ದಂಡ ವಿಧಿಸಿ ತೀರ್ಪು ನೀಡಿದ್ದು ಸಂತ್ರಸ್ತೇಗೆ 4 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಕೋರ್ಟ್ ಆದೇಶ ನೀಡಿದೆ.