ರಾಯಚೂರು :ರಾಯಚೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 15 ಸಾವಿರ ರೂ.ದಂಢ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರಿನ 3 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿ ಹುಲ್ಲಪ್ಪಗೆ 20 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಪೋಕ್ಸೋ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌ ತೀರ್ಪು ನೀಡಿದ್ದು, ನೋಂದ ಬಾಲಕಿಗೆ 9 ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದೆ. ಸರ್ಕಾರದ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ತೀರ್ಪು ನೀಡಿದೆ. 2021 ರಲ್ಲಿ ಲಿಂಗಸೂಗುರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಪರಾಧಿ ಹುಲ್ಲಪ್ಪ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಲಿಂಗಸುಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share.
Exit mobile version