ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇದೀಗ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಇದೀಗ ರಾಜ್ಯದಲ್ಲಿ ಒಟ್ಟು 35 ಪ್ರಕರಣಗಳು ಸಕ್ರಿಯವಾಗಿವೆ. ಹಾಗಾಗಿ ನಾಳೆಯಿಂದ ರಾಜ್ಯದ 8 ಮೆಡಿಕಲ್ ಕಾಲೇಜ್ ಗಳಲ್ಲಿ ಕೋವಿಡ್ ಟೆಸ್ಟ್ ಆರಂಭಿಸಲಾಗಿದೆ. ಬೆಂಗಳೂರಿನಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದ್ದು, ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿತ್ತು.
ಈ ಕುರಿತು ಸಭೆ ಮಾಡಿ ತಾಂತ್ರಿಕ ಸಲಹಾ ಸಮಿತಿ ಆರೋಗ್ಯ ಸಚಿವರಿಗೆ ಈ ಕುರಿತು ಸಲಹೆ ನೀಡಿದೆ. ಸಲಹಾ ಸಮಿತಿ ಸೂಚನೆ ಮೇರೆಗೆ ಕೋವಿಡ್ ಟೆಸ್ಟ್ ಗೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಕೋಮಾರ್ಬಿಟಿಸ್, ಸಾರಿ, ILI ರೋಗಲಕ್ಷಣ ಹೊಂದಿರುವವರಿಗೆ ಟೆಸ್ಟ್ ಮಾಡಲಾಗುತ್ತದೆ ಎಲ್ಲೆಲ್ಲಿ ಟೆಸ್ಟ್ ಅಂತ ಆರೋಗ್ಯ ಇಲಾಖೆ ಸಂಜೆ ಮಾಹಿತಿ ನೀಡಲಿದೆ.
ಇದೀಗ ಉಸಿರಾಟ ಸಮಸ್ಯೆ, SARI ಕೇಸ್ ನಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ ಎಂದು ಆರೋಗ್ಯ ಸಚಿವ ಗಣೇಶ ಗುಂಡುರಾವ್ ಇದೀಗ ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಒಂದು ತಿಂಗಳಿಗೆ ಆಗುವಷ್ಟು ಟೆಸ್ಟ್ ಕಿಟ್ ತೆಗೆದು ಇಡುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ 32 ಜನರಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ. ಉಸಿರಾಟದ ತೊಂದರೆ ಇರುವವರು SARI ಪ್ರಕರಣ ಹೃದಯ ಸಂಬಂಧಿ ಕಾಯಿಲೆ ಇರುವವರಿಗೆ ಕೋವಿಡ್ ಟೆಸ್ಟ್ ಗೆ ಸೂಚನೆ ನೀಡಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ ಕಡ್ಡಾಯವಾಗಿ ಕೋವಿಡ್ ಟೇಸ್ಟ್ ಮಾಡಿಸುವಂತೆ ಸೂಚನೆ ನೀಡಿದ್ದು, ಜನಸಂದಣಿ ಇರುವ ಕಡೆಗೆ ಬಾಣಂತಿಯರು ಮಾಸ್ಕ ಧರಿಸಲು ಸಲಹೆ ನೀಡಿದ್ದಾರೆ. ಇಲಾಖೆಯ ಮಾರ್ಗಸೂಚಿಯಂತೆ ಮುಂಜಾಗ್ರತೆ ವಹಿಸಿದರೆ ಸಾಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಕಟಣೆ ಹೊರಡಿಸಿದ್ದಾರೆ.