ಬೆಂಗಳೂರು : ಬಿಜೆಪಿಯ ಮಾಜಿ ಸಚಿವ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಎನ್ ಡಿಎ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿದ್ದು, ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ನಾಯಕರ ಒಂದು ಸಂದೇಶಕ್ಕಾಗಿ ಕಾದು ಕುಳಿತಿದ್ದ ಸಿಪಿ ಯೋಗೇಶ್ವರ್ ನಿನ್ನೆ ರಾತ್ರಿಯವರೆಗೂ ಬಿಜೆಪಿ ನಾಯಕರ ಒಂದು ನಿರ್ಧಾರಕ್ಕೆ ಕಾದು ನೋಡುವ ತಂತ್ರ ಅನುಸರಿಸಿದರು. ಆದರೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗದ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಸಿಪಿ ಯೋಗೇಶ್ವರ್ ಚರ್ಚಿಸಿದ್ದು ಬಹುತೇಕ ಅವರು ಇಂದೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ನಾಯಕರ ನಡೆಗೆ ಸಿಪಿ ಯೋಗೇಶ್ವರ್ ತೀವ್ರ ಅಸಮಾಧಾನ ಹೊರಹಾಕಿದ್ದು, ಬಿಜೆಪಿ ನಾಯಕರ ರೆಸ್ಪಾನ್ಸ್ ಗಾಗಿ ಸಿಪಿ ಯೋಗೇಶ್ವರ್ ಕಾದು ಕುಳಿತಿದ್ದರು. ಚನ್ನಪಟ್ಟಣದ ಕಾಸಿಗೆ ಹೋಟೆಲ್ ನಲ್ಲಿ ಸಿಪಿ ಯೋಗೇಶ್ವರ್ ತಂಗಿದ್ದರು ಸಂಜೆ 6:00 ಒಳಗೆ ನಿಮ್ಮ ತೀರ್ಮಾನ ತಿಳಿಸಿ ಎಂದು ಸಿಪಿ ಯೋಗೇಶ್ವರ್ ತಿಳಿಸಿದರು. ಸಂಸದ ಡಾ. ಸಿಎನ್ ಮಂಜುನಾಥ್ ಹಾಗೂ ಪ್ರಹ್ಲಾದ್ ಜೋಶಿಯವರಿಗೆ ಸಿಪಿ ಯೋಗೇಶ್ವರ್ ತಿಳಿಸಿದರು.ನಿನ್ನೆ ರಾತ್ರಿ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ ಆಗದ ಹಿನ್ನೆಲೆಯಲ್ಲಿ ನೇರವಾಗಿ ಕಾಂಗ್ರೆಸ್ ಸೇರ್ಪಡೆಗೆ ಸಿಪಿ ಯೋಗೇಶ್ವರ್ ಸಜ್ಜಾಗಿದ್ದಾರೆ ಎನ್ನಲಾಗಿದೆ.