ಬೆಂಗಳೂರು : ಬಿಜೆಪಿಯ ಮಾಜಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಗೊಳ್ಳುವಲ್ಲಿ ಕೊನೆಗೂ ಡಿಕೆ ಬ್ರದರ್ಸ್ ಅವರ ತಂತ್ರಗಾರಿಕೆ ಫಲಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಹೌದು ರಾಜ್ಯ ರಾಜಕಾರಣದಲ್ಲಿ ಇಂದು ಅತಿ ದೊಡ್ಡ ಬೆಳವಣಿಗೆ ಆಗಿದ್ದು, ಚನ್ನಪಟ್ಟಣ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಯೆ ಎಲ್ಲಾ ಪಕ್ಷಗಳಿಗೂ ಕಗ್ಗಂಟಾಗಿ ಪರಿಣಮಿಸಿತ್ತು.ಇದೀಗ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷವನ್ನು ಸೇರುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ ಎನ್ನಲಾಗಿದೆ.
ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮರಳಿ ಗೂಡಿಗೆ ಬಂದಿದ್ದಾರೆ. ಹಿಂದೆ ಕೆಲವರು ಬಿಜೆಪಿಗೆ ಹೋಗಿದ್ದರು ಈಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಅವರು ತಿಳಿಸಿದರು.ನಾನು ವಯನಾಡು ಕ್ಷೇತ್ರಕ್ಕೆ ಹೋಗಬೇಕಾಗಿತ್ತು. ಪ್ರಿಯಾಂಕ ಗಾಂಧಿ ಅವರು ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಬೇಕಾಗಿತ್ತು.ಆದರೆ ಅನಿವಾರ್ಯ ಕಾರಣಗಳಿಂದ ಹೋಗಲಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ತೆರಳಿದ್ದಾರೆ ಎಂದು ತಿಳಿಸಿದರು.








