ಬೆಳಗಾವಿ : ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆದರೆ ಕಾನೂನು ಅನ್ನು ದುರ್ಬಳಕೆ ಮಾಡಿಕೊಂಡ ಆರೋಪಿಗಳು ಕಂಡಕ್ಟರ್ ಮಹಾದೇವ ಹುಕ್ಕೇರಿ ಮೇಲೇನೆ ಪ್ರಕರಣ ದಾಖಳಿಸಿದ್ದಾರೆ. ಇದೀಗ ಇದೆ ಪ್ರಕರಣ ದಾಖಲಿಸಿದಕ್ಕೆ ಸಿಪಿಐ ವರ್ಗಾವಣೆಯಾಗಿದ್ದಾರೆ.
ಹೌದು ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟರ್ ಮಾರಿಹಾಳ ಠಾಣೆಯಿಂದ ಬೆಳಗಾವಿಯ ಸಿಸಿಆರ್‌ಬಿಗೆ ಗುರುರಾಜ್ ಅವರನ್ನು ವರ್ಗಾವಣೆ ಮಾಡಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಆದೇಶ ಹೊರಡಿಸಿದ್ದಾರೆ. ಸಧ್ಯ ಮಾರಿಹಾಳ ಠಾಣೆಯ ನೂತನ ಸಿಪಿಐ ಆಗಿ ಮಂಜುನಾಥ ನಾಯಕ ಅವರನ್ನು ನೇಮಕ ಮಾಡಲಾಗಿದೆ.
ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂಡಕ್ಟರ್ ವಿರುದ್ಧ ಅಪ್ರಾಪ್ತ ಬಾಲಕಿಯಿಂದ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಿಸಿದ ಬಳಿಕ… ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ಮಾರಿಹಾಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಾಗಾಗಿ ಇದೀಗ ಸಿಪಿಐ ಅವರನ್ನು ವರ್ಗಾವಣೆಗೊಳಿಸಲಾಗಿದೆ.