ಬೆಳಗಾವಿ : ಸಾಲಗಾರರ ಕಿರುಕುಳಕ್ಕೆ ಬೇಸತ್ತು ಸೆಲ್ಪಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ.
ಸೆಕ್ಯೂರಿಟಿ ಗಾರ್ಡ್ ಅಪ್ಪಾಸಾಬ್ ರೇಖಾ ಸಮಗಾರ, ಭೀಮಾ ವಾಳಕೆ ಎಂಬುವವರಿಂದ 50 ಸಾವಿರ ರೂ. ಸಾಲ ಪಡೆದಿದ್ದರು. ಸಾಲಗಾರರ ಕಿರುಕುಳ ತಾಳಲಾರದೇ ಮನನೊಂದು ಸೆಲ್ಪಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅಪ್ಪಾಸಾಬ್ 50 ಸಾವಿರ ಹಣಕ್ಕೆ ಲಕ್ಷಾಂತರ ರೂ.ಬಡ್ಡಿ ಪಾವತಿಸಿದ್ದರು ಎನ್ನಲಾಗಿದೆ. ಅಲ್ಲದೇ ಇನ್ನೂ ಹೆಚ್ಚಿನ ಬಡ್ಡಿ ನೀಡುವಂತೆ ಕಿರುಕುಳ ನೀಡಿದ್ದರಿಂದ ಮನನೊಂದು ಅಪ್ಪಾ ಸಾಬ್ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.