ಉತ್ತರಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ಕಾರಿನಲ್ಲಿ 1 ಕೋಟಿ ನಗದು ಹಣ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಕರಣದ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿ ಆಗಲು ಯತ್ನಿಸಿದ್ದಾರೆ ಈ ವೇಳೆ ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಹೌದು ಜನೆವರಿ 29 ರಂದು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ರಾಮನಗುಳಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಕ್ರೇಟಾ ಕಾರಿನಲ್ಲಿ 1 ಕೋಟಿ ರೂ.ನಗದು ಪತ್ತೆಯಾಗಿತ್ತು. ಈ ಒಂದು ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ಮಂಗಳೂರು ಮೂಲದ ತಲ್ಲತ್ತ ಹಾಗು ನವಫಾಲ್ ಗೆ ಇದೀಗ ಗುಂಡೇಟು ತಗುಲಿದೆ.
ಆರೋಪಿಗಳನ್ನು ಅಂಕೋಲಾ ಕಡೆ ಕರೆದೊಯ್ಯುವಾಗ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾರೆ. ಆತ್ಮ ರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ನಾಲ್ವರು ಪೊಲೀಸರಿಗೆ ಗಾಯಗಳಾಗಿದ್ದು ಗಾಯಾಳು ಪೊಲೀಸರನ್ನು ಹಳಿಯಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.