ಆಂಧ್ರಪ್ರದೇಶ : ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಮೂವರು ಸಾವನಪ್ಪಿರುವ ಘಟನೆ ಆಂಧ್ರಪ್ರದೇಶದ ಜಡಚರ್ಲ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಮೃತರನ್ನ ರಾಮರೆಡ್ಡಿ (52) ಮೇಘ (50) ಹಾಗು ಮಹದೇವಪ್ಪ (65) ಎಂದು ತಿಳಿದುಬಂದಿದೆ. ರಾಮರೆಡ್ಡಿ ಮತ್ತು ಮೇಘಾ ದಂಪತಿ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಗೋಗಿ ಗ್ರಾಮದವರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇವರಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.








