ಚೆನ್ನೈ : ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ತಿರುವಣ್ಣಾಮಲೈನಲ್ಲಿ ಮನೆ ಮೇಲೆ ಗುಡ್ಡ ಕುಸಿದು ಘೋರ ದುರಂತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಒಂದೇ ಕುಟುಂಬದ7 ಮಂದಿ ಸಾವನ್ನಪ್ಪಿದ್ದಾರೆ.
ಫೆಂಗಲ್’ ಚಂಡಮಾರುತದ ಸಮಯದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಐವರು ಮಕ್ಕಳು ಸೇರಿದಂತೆ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೆಸಿಬಿ ಬಳಸಿ ಮಣ್ಣು ತೆರವುಗೊಳಿಸಲಾಗುತ್ತಿದ್ದು, ಸದ್ಯ ನಾಲ್ವರ ಮೃತದೇಹ ಸಿಕ್ಕಿದೆ. ಇನ್ನುಳಿದ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಪರಿಸ್ಥಿತಿಗೆ ಸ್ಪಂದಿಸಿ, ಅಣ್ಣಾಮಲೈಯರ್ ಬೆಟ್ಟದ ಕೆಳ ಇಳಿಜಾರುಗಳ ಬಳಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ಮತ್ತು ಸ್ಥಳೀಯ ತಂಡಗಳು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.