ಬೆಂಗಳೂರು : ಫೆಂಗಸ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ತುಂತುರು ಮಳೆ ಆರಂಭವಾಗಿದ್ದು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಬೆಂಗಳೂರಿನ ಹಲವಡೆ ಬೆಳಗ್ಗೆಯಿಂದ ಜಿಟಿಜಿಟಿ ಮಳೆ ಶುರುವಾಗಿದ್ದು, ಮೆಜೆಸ್ಟಿಕ್, ರೇಸ್ ಕೋರ್ಸ್, ಕೆ.ಆರ್. ಸರ್ಕಲ್, ವಿಧಾನಸೌಧ, ಕಾರ್ಪೋರೇಷನ್, ಟೌನ್ ಹಾಲ್, ಕೆ.ಆರ್.ಮಾರ್ಕೆಟ್ ಸೇರಿದಂತೆ ಹಲವಡೆ ಮಳೆಯಾಗುತ್ತಿದೆ. ಬೆಂಗಳೂರು ವಾತಾವರಣ ಕೂಲ್- ಕೂಲ್ ಆಗಿದ್ದು, ಬೆಳಗೆದ್ದು ಕೆಲಸಕ್ಕೆ ತೆರಳುವ ಮಂದಿಗೆ ಕೊಂಚ ಕಿರಿಕಿರಿ ಉಂಟು ಮಾಡುತ್ತಿದೆ.
ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆಯ ಸಿಂಚನವಾಗಿದೆ. ಹೀಗಾಗಿ ವಾಹನ ಸವಾರರಿಗೂ ತೊಂದರೆ ಆಗಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ನಗರದ ಹಲವಡೆ ಮಂಜು ಮುಸುಕಿದೆ. ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.