ಬಾಗಲಕೋಟೆ : ಬಾಗಲಕೋಟೆಯ ಬನಹಟ್ಟಿಯಲ್ಲಿ ಭೀಕರ ಅವಘಡವೊಂದು ಸಂಭವಿಸಿದ್ದು, ಪೊಲೀಸ್ ಕ್ವಾಟರ್ಸ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ.
ಬನಹಟ್ಟಿಯಲ್ಲಿರುವ ಪೊಲೀಸ್ ಕ್ವಾಟರ್ಸ್ ನಲ್ಲಿ ಸಿಲಿಂಡರ್ ಲೀಕ್ ಆಗಿ ಸ್ಪೋಟಗೊಂಡಿದ್ದು, ಮನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಸ್ವಲ್ಪದರಲ್ಲೇ ಭಾರೀ ದುರಂತವೊಂದು ತಪ್ಪಿದೆ.
ಅವಘಡದಲ್ಲಿ ಹೆಡ್ ಕಾನ್ಸ್ ಟೇಬಲ್ ರವೀಂದ್ರ ದಳವಾಯಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಲಿಂಡರ್ ಸ್ಪೋಟದಿಂದ ಮನೆಯಲ್ಲಿರುವ ಸಾವಿರಾರು ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.