ಬೆಂಗಳೂರು : ಬೆಂಗಳೂರಿನ ಪುಲಕೇಶಿ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಪುಲಕೇಶಿ ನಗರದಲ್ಲಿರುವ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಒಂದರಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಸಿಲಿಂಡರ್ ಸ್ಪೋಟಗೊಂಡಿವೆ. ಒಟ್ಟಿಗೆ 4 ಸಿಲಿಂಡರ್ ಬ್ಲ್ಯಾಸ್ಟ್ ಆದ ಪರಿಣಾಮ ಫ್ಲ್ಯಾಟ್ ಹೊತ್ತಿ ಉರಿದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.