ಬೆಂಗಳೂರು : ಬೆಂಗಳೂರಿನಲ್ಲಿ ಶಿವರಾತ್ರಿ ದಿನದಂದೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಭಾರೀ ಸ್ಫೋಟ ಸಂಭವಿಸಿದೆ. ಯಲಹಂಕದ ಚೌಡೇಶ್ವರಿ ಲೇಔಟ್ ನ ಮನೆ ಒಂದರಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಮನೆಯ ಗೋಡೆ ಸಂಪೂರ್ಣವಾಗಿ ಛಿದ್ರ ಛಿದ್ರವಾಗಿದೆ.
ಬಾಗೆಪಲ್ಲಿ ಮೂಲದ ದಂಪತಿ ರಾಜು ಮತ್ತು ಕೃಷ್ಣಮ ಎಂಬುವವರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ದಂಪತಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಯಲಹಂಕ ಠಾಣೆ ಪೂರಿಸಲು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.








