ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ನಗರದ ಸಿದ್ದೇಶ್ವರ ನಗರದಲ್ಲಿ ಮನೆಯೊಂದರಲ್ಲಿ ಎಲ್ ಪಿ ಜಿ ಸಿಲಿಂಡರ್ ಸ್ಫೋಟಗೊಂಡು ಮಹೇಶ್ ಎಂಬುವವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ಮಹೇಶ್ ಮೋಹಿನಿ ದಂಪತಿ ಮನೆಯಲ್ಲಿ ಇಲ್ಲದಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ ಮನೆಯಲ್ಲಿ ಇದಂತಹ 80 ಗ್ರಾಂ ಚಿನ್ನಾಭರಣ, ದವಸ, ಧಾನ್ಯ ಬಟ್ಟೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು ಟಿವಿ, ವಾಷಿಂಗ್ ಮಷೀನ್ ಸೇರಿದಂತೆ ಎಲ್ಲವೂ ಸುಟ್ಟು ಕರಕಲಾಗಿದೆ ವಿಷಯ ತಿಳಿದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.








